X Close
X

ಏಷ್ಯಾ ಕಪ್ 2018: ನಾಯಕ ಕೊಹ್ಲಿ, ಹಾರ್ದಿಕ್ ಪಾಂಡ್ಯಗೆ ಖೋಕ್?


kohli-0154
ಸೆ.15 ರಿಂದ ಯುಎಇ ನಲ್ಲಿ ಪ್ರಾರಂಭವಾಗಲಿರುವ ಏಷ್ಯಾ ಕಪ್ 2018 ಟೂರ್ನಿಯಲ್ಲಿ ವಿರಾಟ್ ಕೊಹ್ಲಿಗೆ ವಿರಾಮ ನೀಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ, ಕೆಲವು ತಿಂಗಳುಗಳಿಂದ ನಿರಂತರವಾಗಿ ಪಂದ್ಯಗಳನ್ನಾಡುತ್ತಿದ್ದಾರೆ. ಈ ನಡುವೆ ಕೊಹ್ಲಿಗೆ ಕುತ್ತಿಗೆ ನೋವಿನ ಸಮಸ್ಯೆಯೂ ಕಾಣಿಸಿಕೊಂಡಿತ್ತು. ವರ್ಷಾಂತ್ಯಕ್ಕೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗಳೂ ನಿಗದಿಯಾಗಿರುವುದರಿಂದ ನಾಯಕ ವಿರಾಟ್ ಕೊಹ್ಲಿಗೆ ಆಯ್ಕೆ ಸಮಿತಿ ವಿರಾಮ ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಸೆ.01 ರಂದು ಏಷ್ಯಾ ಕಪ್ ಟೂರ್ನಿಗೆ ಭಾರತ ತಂಡ ಪ್ರಕಟಗೊಳ್ಳಲಿದ್ದು ವಿರಾಟ್ ಜೊತೆಗೆ ಹಾರ್ದಿಕ್ ಪಾಂಡ್ಯಗೂ ವಿರಾಮ ನೀಡುವ ಸಾಧ್ಯತೆ ಇದೆ

ಟೂರ್ನಿಯಲ್ಲಿ ಭಾರತದ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದೊಂದಿಗೆ ಕನಿಷ್ಠ ಎರಡು ಪಂದ್ಯಗಳಾದರೂ ಎದುರಾಗಲಿದ್ದು, ಈ ಅಂಶ ಕೊಹ್ಲಿಯನ್ನು ಆಡುವಂತೆ ಮಾಡಬಹುದು ಎಂದೂ ಹೇಳಲಾಗುತ್ತಿದೆ. ಕೊಹ್ಲಿಗೆ ವಿರಾಮ ನೀಡಿದ್ದೇ ಆದಲ್ಲಿ ಟೀಂ ಇಂಡಿಯಾದ ಉಪನಾಯಕ ರೋಹಿತ್ ಶರ್ಮಾ ತಂಡದ ನೇತೃತ್ವ ವಹಿಸಲಿದ್ದಾರೆ ಎನ್ನಲಾಗುತ್ತಿದೆ. (KANNADA PRABHA)