X Close
X

ಕೊಡಗಿನಲ್ಲಿ ಮಹಾಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ರು. ಪರಿಹಾರ, ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯ


KUMARASWAMY_87543221
ಬೆಂಗಳೂರು: ಕೊಡಗಿನಲ್ಲಿ ದೊಡ್ಡ ಅನಾಹುತವಾಗಿದೆ, ಕಾಫಿ, ಅಡಕೆ, ಮೆಣಸು ಬೆಳೆ ನಷ್ಟವಾಗಿದೆ, ನಷ್ಟವಾಗಿರುವ ಸಂಬಂಧ ಇನ್ನೂ 2-3 ದಿನಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ,

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುಮಾರ ಸ್ವಾಮಿ, ಸುಮಾರು 200 ಎಕರೆ ಪ್ರದೇಶದಲ್ಲಿ ಭೂ ಕುಸಿತವಾಗಿದೆ, ಅಧಿಕಾರಿಗಳು 24 ಗಂಟೆ ಕೆಲಸ ಮಾಡುತ್ತಿದ್ದಾರೆ. ಕೊಡಗಿನಲ್ಲಿ ಸುಮಾರು 30 ಕಡೆ ಗಂಜಿ ಕೇಂದ್ರ ತೆರೆಯಲಾಗಿದೆ, ಎಲ್ಲಾ ಎಟಿಎಂಗಳಲ್ಲಿ ಹಣ ಸಿಗುವಂತೆ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ವಸ್ತುಗಳನ್ನು ಹೆಲಿಕಾಫ್ಟರ್ ಮೂಲಕ ರವಾನಿಸಲಾಗುತ್ತಿದೆ ಎಂದು ಹೇಳಿದ್ದಾರೆ. Read More ()