X Close
X

ಪಾಕ್ ಪ್ರಧಾನಿಗೆ ಪತ್ರ ಬರೆದ ಮೋದಿ, ರಚನಾತ್ಮಕ ಮಾತುಕತೆಗೆ ಭಾರತ ಸಿದ್ಧ


modi-khan
ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಬರೆದಿದ್ದು, ಭಾರತ, ಪಾಕಿಸ್ತಾನದೊಂದಿಗೆ ರಚನಾತ್ಮಕ ಮತ್ತು ಅರ್ಥಪೂರ್ಣ ಮಾತುಕತೆ ನಡೆಸಲು ಸಿದ್ಧವಿದೆ ಎಂದು ಹೇಳಿದ್ದಾರೆ.

ನೆರೆಯ ರಾಷ್ಟ್ರ ಪಾಕಿಸ್ತಾನದೊಂದಿಗೆ ಶಾಂತಿ ಕಾಯ್ದುಕೊಳ್ಳಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭಯೋತ್ಪಾದನೆ ಮುಕ್ತ ದಕ್ಷಿಣ ಏಷ್ಯಾಗಾಗಿ ನಾವು ಕೆಲಸಮಾಡಬೇಕಾದ ಅಗತ್ಯ ಇದೆ ಎಂದು ಪ್ರಧಾನಿ ಒತ್ತಿ ಹೇಳಿರುವುದಾಗಿ ಅವರು ತಿಳಿಸಿದ್ದಾರೆ.

ಇಮ್ರಾನ್ ಖಾನ್ ಅವರು ಕಳೆದ ಶುಕ್ರವಾರ ಪಾಕಿಸ್ತಾನ 22ನೇ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. (KANNADA PRABHA)