X Close
X

'ಸಾಹುಕಾರ್' ರಾಜಿನಾಮೆ ನಂತರ ಖಾಲಿ ಉಳಿದಿರುವ ಖಾತೆ: ಮತ್ತೆ ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ದುಂಬಾಲು!


ramesh-new
Bengaluru:

ಬೆಂಗಳೂರು:  ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಬಂಧ ಚರ್ಚೆ ನಡೆಯುವ ಸಾಧ್ಯತೆಯಿದೆ.

ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ರಿಲೀಸ್ ನಂತರ ನೈತಿಕ ಹೊಣೆ ಹೊತ್ತು ಮಾರ್ಚ್ ತಿಂಗಳಿನಲ್ಲಿ ರಾಜಿನಾಮೆ ನೀಡಿದ್ದರು. ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ಇನ್ನು ಮುಂದುವರಿದಿದೆ, ಆದರೆ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ ಬುಧವಾರ ನಡೆಯುವ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಂಬಂಧ ಚರ್ಚೆ ನಡೆಯಲಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಸರ್ಕಾರವನ್ನು ಅಸ್ಥಿತ್ವಕ್ಕೆ ತರುವಲ್ಲಿ ರಮೇಶ್ ಜಾರಕಿಹೊಳಿ ಪ್ರಮುಖ ಪಾತ್ರ ವಹಿಸಿದ್ದರು. ರಾಜಿನಾಮೆ ನಂತರವೂ ಜಲ ಸಂಪನ್ಮೂಲ ಖಾತೆಯನ್ನು ಸಿಎಂ ಯಡಿಯೂರಪ್ಪ ಯಾರಿಗೂ ಹಂಚಿಕೆ ಮಾಡಿಲ್ಲ, ಸಿಎಂ ಮತ್ತು ಸಚಿವ ಬಸವರಾಜ ಬೊಮ್ಮಾಯಿ ಅವರು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜೊತೆ ಹಲವು ಸುತ್ತಿನ ಚರ್ಚೆ ನಡೆಸಿದ್ದಾರೆ. ಅಂತರಾಜ್ಯ ನೀರು ಹಂಚಿಕೆ ವಿವಾದ ಮತ್ತು ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸಮಾಲೋಚನೆ ನಡೆಸಿದ್ದರು, ಮೇ ತಿಂಗಳಲ್ಲಿ ದೆಹಲಿಗೆ ತೆರಳಿದ್ದ ರಮೇಶ್ ಜಾರಕಿಹೊಳಿ ತಮ್ಮನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಜೊತೆಗೂಡಿ ರಮೇಶ್ ಜಾರಕಿ ಹೊಳಿ ಬಿಜೆಪಿ ಸರ್ಕಾರ ರಚಿಸಲು ಸಹಾಯ ಮಾಡಿದ್ದರು. ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು. ಬಿಜೆಪಿ ನಾಯಕನನ್ನು ಸರ್ಕಾರ ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.