ನವದೆಹಲಿ: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಸೆಪ್ಟೆಂಬರ್ ನಲ್ಲಿ ನಡೆಯಬೇಕಾಗಿದ್ದ ಏಷ್ಯಾ ಕಪ್ ಟೂರ್ನಿಯನ್ನು ಮುಂದಿನ ವರ್ಷದ ಜೂನ್ ಗೆ ಏಷ್ಯಾ ಕ್ರಿಕೆಟ್ ಸಮಿತಿ ಮುಂದೂಡಿದೆ.
ಈ ನಿರ್ಧಾರದಿಂದಾಗಿ ಸೆಪ್ಟೆಂಬರ್ ನಿಂದ ನವೆಂಬರ್ ವರೆಗೂ ಐಪಿಎಲ್ ನಡೆಸಲು ಪ್ರಯತ್ನಿಸುತ್ತಿರುವ ಸಂಘಟಕರಿಗೆ ಹಾದಿ ಸುಗಮವಾದಂತಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಭಾವವನ್ನು ಎಚ್ಚರಿಕೆಯಿಂದ ಪರಿಗಣಿಸಿ ಎಸಿಸಿ ಕಾರ್ಯಕಾರಿ ಮಂಡಳಿ ಸೆಪ್ಟೆಂಬರ್ ನಲ್ಲಿ ನಡೆಯಬೇಕಾಗಿದ್ದ ಏಷ್ಯಾ ಕಪ್ ಪಂದ್ಯಾವಳಿಯವನ್ನು ಮುಂದೂಡಲು ನಿರ್ಧರಿಸಿದೆ ಎಂದು ಏಷ್ಯನ್ ಕ್ರಿಕೆಟ್ ಸಮಿತಿ ಟ್ವೀಟ್ ಮಾಡಿದೆ.
After careful consideration and evaluating the impact of the COVID-19 pandemic, the Executive Board of the ACC has decided to postpone the Asia Cup tournament that was scheduled for September 2020.
— AsianCricketCouncil (@ACCMedia1) July 9, 2020
For more https://t.co/XBQFh3O1ZO#ACC #AsiaCup2020 pic.twitter.com/Sdduyzc8mM
ಈ ಬಾರಿ ಪಾಕಿಸ್ತಾನ ಏಷ್ಯಾ ಕಪ್ ಅತಿಥ್ಯ ವಹಿಸಬೇಕಾಗಿತ್ತು. ಆದರೆ, ಭದ್ರತೆ ಕಾರಣ ಶ್ರೀಲಂಕಾದಲ್ಲಿ ಪಂದ್ಯಾವಳಿ ಆಯೋಜಿಸಲು ಸಿದ್ಧತೆ ನಡೆಸಲಾಗಿತ್ತು.