X Close
X

ವೇತನ ಹೆಚ್ಚಳ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ


Asha-worker

ಬೆಂಗಳೂರು: ಗೌರವ ದನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 42 ಸಾವಿರ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. 

ಕೊರೋನಾ ನಿಯಂತ್ರಣದಲ್ಲಿ ಸಕ್ರಿಯರಾಗಿರುವ ಇವರ ಮುಷ್ಕರದಿಂದ ಸೋಂಕಿನ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಗುತ್ತಿಗೆ ವೈದ್ಯರ ಮುಷ್ಕರ ತಣ್ಣಗಾಗುತ್ತಿದ್ದಂತೆಯೇ ಇದು ಸರ್ಕಾರಕ್ಕೆ ಇನ್ನೊಂದು ತಲೆನೋವಾಗಿ ಕಾಡಲಿದೆ.

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಾಸಿಕ ರೂ.6 ಸಾವಿರ ವೇತನ ನೀಡಲಾಗುತ್ತಿದೆ. ಈ ಮೊತ್ತವನ್ನು ಒಟ್ಟಾಗಿ ರೂ.12 ಸಾವಿರಗೆ ಏರಿಕೆ ಮಾಡುವಂತೆ ಹಲವು ಬಾರಿ ಸರ್ಕಾರಕ್ಕೆ ಸಮನವಿ ಮಾಡಿದ್ದರೂ ಬೇಡಿಕೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸೇವೆ ಬಹಿಷ್ಕರಿಸಿ ಮುಷ್ಕರ ಹಾದಿ ಹಿಡಿದಿದ್ದಾರೆ. ಜು.10ರಂದು ಆಯಾ ಜಿಲ್ಲೆಗಳು. ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಿದ್ದಾರೆ.

(KANNADA PRABHA)