X Close
X

ಕಾಂಗ್ರೆಸ್ ಸಾಲ ಮನ್ನಾಕ್ಕೆ ಪ್ರತಿತಂತ್ರ ರೂಪಿಸಿದ ಪ್ರಧಾನಿ ಮೋದಿ: ಶೀಘ್ರದಲ್ಲೇ ರೈತ ಪರ ದೊಡ್ಡ ಘೋಷಣೆ ಸಾಧ್ಯತೆ


modi
Bengaluru:ನವದೆಹಲಿ: ಲೋಕಸಭಾ ಚುನಾವಣೆ 2019 ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಚುನಾವಣೆಗೆ ರೈತರ ಸಮಸ್ಯೆಗಳನ್ನು ಕಾಂಗ್ರೆಸ್ ತನ್ನ ಪ್ರಮುಖ ಚುನಾವಣಾ ವಿಷಯವಾಗಿ ಮಾಡಿಕೊಳ್ಳುವುದು ಬಹುತೇಕ ಖಚಿತಗೊಂಡಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅದಕ್ಕೆ ಪ್ರತಿತಂತ್ರ ರೂಪಿಸಲು ಆರಂಭಿಸಿದ್ದಾರೆ. 
ಕಾಂಗ್ರೆಸ್ಸಿನ ಸಾಲ ಮನ್ನಾ ಅಸ್ತ್ರವನ್ನು ನಿಷ್ಕ್ರಿಯಗೊಳಿಸಲು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ 'ಭಾವಾಂತರ' (ಭಾವ್-ಬೆಲೆ, ಅಂತರ್-ವ್ಯತ್ಯಾಸ) ಯೋಜನೆ ಜಾರಿಗೆ ಬರೋಬ್ಬರಿ 3 ಗಂಟೆಗಳ ಕಾಲ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ. 
ಕನಿಷ್ಠ ಬೆಂಬಲ ಬೆಲೆ (ಎಂಎಸ್'ಪಿ ಹಾಗೂ ಮಾರುಕಟ್ಟೆ ಬೆಲೆಯ ನಡುವಣ ವ್ಯತ್ಯಾಚಾಸದ ಮೊತ್ತವನ್ನು ರೈತರಿಗೆ ನೇರವಾಗಿ ವರ್ಗಾವಣೆ ಮಾಡುವುದೇ ಭಾವಾಂತರವಾಗಿದೆ. ಜ.5 ರಂದು ಸಂಸತ್ತಿನಲ್ಲಿ ಚಳಿಗಾಲ ಅಧಿವೇಶನ ಅಂತ್ಯಗೊಳ್ಳಲಿದ್ದು, ಅಧಿವೇಶನ ಪೂರ್ಣಗೊಳ್ಳುವಷ್ಟರಲ್ಲಿ ಪ್ರಧಾನಿ ಮೋದಿಯವರು ಈ ಕುರಿತು ದೊಡ್ಡ ಘೋಷಣೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಇದಷ್ಟೇ ಅಲ್ಲದೆ, ಬಿಜೆಪಿ ಆಳ್ವಿಕೆಯ ಜಾರ್ಖಾಂಡ್ ನಲ್ಲಿರುವ ರೈತರಿಗೆ ನೇರ ಸಬ್ಸಿಡಿ ವರ್ಗಾವಣೆ ಯೋಜನೆ ಕುರಿತು ಸರ್ಕಾರ ಪರಿಶೀಲಿಸುತ್ತಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಲ್ಲಿನ ಸಾಲ ಮಿತಿಯನ್ನು ಹೆಚ್ಚಳ ಮಾಡುವ ಪ್ರಸ್ತಾಪವೂ ಇದೆ ಎಂದು ತಿಳಿದುಬಂದಿದೆ. 
ಈ ಎಲ್ಲಾ ಬೆಳವಣಿಗೆಗಳ ನಡುವಲ್ಲೇ ದೇಶದಾದ್ಯಂತ ರೈತರ ಸಾಲ ಮನ್ನಾ ಮಾಡುವವರೆಗೂ ಪ್ರಧಾನಿ ಮೋದಿಯವರನ್ನು ನಿದ್ರಿಸಲು ಬಿಡುವುದಿಲ್ಲ ಎಂದು ಶಪಥ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಮೋದಿ ಟಾಂಗ್ ನೀಡಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ರೈತರನ್ನು ತಪ್ಪು ಹಾದಿಗೆಳೆಯುವಲ್ಲಿ ಕಾಂಗ್ರೆಸ್ ಮಾಸ್ಟರ್ ಆಗಿದೆ. ಅವರ ನಕಲಿ ಭರವಸೆಗಳು ಹಾಗೂ ಸಾಂಕೇತಿಕ ಮೊತ್ತ (ಟೋಕನಿಸಮ್) ಭಾರತದಲ್ಲಿ ಬೆವರು ಸುರಿಸಿ ದುಡಿಯುವ ರೈತರನ್ನು ತಣ್ಣಗಾಗಿಸುವುದಿಲ್ಲ ಎಂದು ಹೇಳಿದ್ದಾರೆ.