X Close
X

ನಟ ದರ್ಶನ್ ಅಭಿಮಾನಿಗಳಿಂದ ಪೊಲೀಸ್ ಮೇಲೆ ಹಲ್ಲೆ!


darshan

ಬೆಂಗಳೂರು: ನಟ ದರ್ಶನ್ ಹುಟ್ಟುಹಬ್ಬದ ಆಚರಣೆ ವೇಳೆ ರಾಜರಾಜೇಶ್ವರಿ ನಗರದ ಐಡಿಯಲ್ ಹೋಂ ಲೇಔಟ್ ಬಳಿ ಭದ್ರತೆಗೆ ನಿಯೋಜನೆಗೊಗಂಡಿದ್ದ ಪೊಲೀಸ್ ಒಬ್ಬರ ಮೇಲೆ ದರ್ಶನ್ ಅವರ ಅಭಿಮಾನಿಗಳು ಹಲ್ಲೆ ನಡೆಸಿದ್ದರೆಂದು ತಿಳಿದುಬಂದಿದೆ. 

ಜ್ಞಾನಭಾರತಿ ಠಾಣೆ ಕಾನ್ ಸ್ಟೇಬರ್ ದೇವರಾಜ್ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

ದರ್ಶನ್ ಹುಟ್ಟುಹಬ್ಬ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮೇ ಲೇಔಟ್ ನ ನಿವಾಸದ ಎದುರು ದೇವರಾಜ್ ಸೇರಿದಂತೆ ಹಲವರನ್ನು ಭದ್ರತೆಗೆ ನಿಯೋಜನೆಗೊಳಿಸಲಾಗಿತ್ತು. ಕಾರ್ಯಕ್ರಮ ಸ್ಥಳದಲ್ಲಿ ಅಭಿಮಾನಗಿಳು ಸರದಿಯಲ್ಲಿ ಹೋಗಲು ಆಯೋಜಕರು ಸೂಕ್ತ ವ್ಯವಸ್ಥೆ ಮಾಡಿರಲಿಲ್ಲ. ಹೀಗಾಗಿ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿತ್ತು. ಈ ವೇಳೆ ಸಾಲಿನಲ್ಲಿ ಹೋಗುವಂತೆ ದೇವರಾಜ್ ಅವರು ತಿಳಿಸಿದ್ದಾರೆ. ಇದಕ್ಕೆ ಕೆಲ ಅಭಿಮಾನಿಗಳು ಕೆಂಡಾಮಂಡಲಗೊಂಡಿದ್ದಾರೆ. ಅಲ್ಲದೆ ಪೇದೆ ದೇವರಾಜ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. 

ದೇವರಾಜ್ ಅವರ ತಲೆ, ಮೂಗು ಹಾಗೂ ಬಲಗಣ್ಣಿಗೆ ಬಲವಾಗಿ ಹೊಡೆದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡು ರಕ್ತಸ್ರಾವವಾಗಲು ಶುರುವಾಗಿದೆ. ಕೂಡಲೇ ಸಹೋದ್ಯೋಗಿಗಳು ಸ್ಥಳಕ್ಕೆ ಧಾವಿಸಿ ದೇವರಾಜ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

ದೇವರಾಜ್ ಅವರು ದೂರು ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಪೊಲೀಸರು ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. 

ಕೆಸ ಅಭಿಮಾನಿಗಳು ಮುಖ್ಯ ದ್ವಾರದ ಗೇಟ್ ಹಾರಿ ದರ್ಶನ್ ಮನೆಯ ಮಹಡಿ ಮೇಲೆ ಹತ್ತಲು ಶುರು ಮಾಡಿದ್ದರು. ಇದೀಗ ದರ್ಶನ್ ಅವರ ಅಕ್ಕಪಕ್ಕದ ಮನೆಯವರು ಕೂಡ ಅಭಿಮಾನಿಗಳ ದುರ್ವರ್ತನೆ ವಿರುದ್ಧ ದೂರು ದಾಖಲಿಸಿದದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

(KANNADA PRABHA)