X Close
X

ಯಾವುದೇ ಹುದ್ದೆ ನೀಡದೆ ಐಎಎಸ್ ಐಧಿಕಾರಿ ಮಣಿವಣ್ಣನ್ ಎತ್ತಂಗಡಿ


ias-new

ಬೆಂಗಳೂರು: ಕಾರ್ಮಿಕ ಇಲಾಖೆ ಮತ್ತು ವಾರ್ತಾ ಇಲಾಖೆಯಿಂದ ಪಿ.ಮಣಿವಣ್ಣನ್ ಅವರನ್ನು ಎತ್ತಂಗಡಿ ಮಾಡಲಾಗಿದ್ದು, ಅವರ ಜಾಗಕ್ಕೆ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಎಂ.‌ಮಹೇಶ್ವರ್ ರಾವ್ ರನ್ನು ಈ‌ ಎರಡು ಇಲಾಖೆಯ ಪ್ರಧಾ‌ನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. 

ಕೋವಿಡ್ ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರವನ್ನು ಪರಿಣಾಮಕಾರಿಯಾಗಿ ಮುಂದುವರಿಸಲು ಶ್ರೀ ಮಣಿವಣ್ಣನ್ ವರ್ಗಾವಣೆಯನ್ನು ಕೂಡಲೆ ರದ್ದುಪಡಿಸಿ ಕಾಮಿ೯ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅವರನ್ನೇ ಮುಂದುವರಿಸಬೇಕೆಂದು ಒತ್ತಾಯಿಸಲಾಗಿದೆ.

ಆದರೆ, ಈ ವರೆಗೆ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾ‌ನ ಕಾರ್ಯದರ್ಶಿಯಾಗಿದ್ದ ಮಣಿವಣ್ಣನ್ ರನ್ನು ವರ್ಗಾವಣೆ ಮಾಡಲಾಗಿದೆಯಾದರೂ, ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಸರ್ಕಾರದ ಈ ನಡೆ ಸಾಮಾನ್ಯವಾಗಿ ಅಚ್ಚರಿಗೆ ಕಾರಣವಾಗಿದೆ.

(KANNADA PRABHA)