X Close
X

15 ಮಂದಿ ಕಾಂಗ್ರೆಸ್ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್


kateel
Bengaluru:

ಬೆಂಗಳೂರು: 15 ಮಂದಿ ಕಾಂಗ್ರೆಸ್ ಪಕ್ಷದ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. 

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆಂದು ಹೇಳಿದ್ದಾರೆ. ಆದರೆ, ಯಾವ ಯಾವ ಶಾಸಕರು ತಮ್ಮೊಂದಿಗಿದ್ದಾರೆಂಬ ವಿಚಾರವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. 

ಇದೇ ವೇಳೆ ಎಂಎಲ್ಸಿ ಸಿ ಪಿ ಯೋಗೇಶ್ವರ್ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆಂದು ತಿಳಿದುಬಂದಿದೆ. 

ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್ ಅವರು, ಬಿಜೆಪಿ ಪಕ್ಷ ಈಗಾಗಲೇ ದೇಶದಲ್ಲಿ ಅಧಿಕಾರದಲ್ಲಿದೆ. ಬಿಜೆಪಿ ಜೊತೆಗೆ 224 ಶಾಸಕರು ಸಂಪರ್ಕದಲ್ಲಿದ್ದಾರೆಂಬು ನಾನು ಭಾವಿಸಿದ್ದೆ, ಆದರೆ, ನಳಿನ್ ಕುಮಾರ್ ಕಟೀಲ್ ಕೇವಲ 15 ಶಾಸಕರು ಮಾತ್ರ ಎಂದು ಏಕೆ ಹೇಳಿದ್ದಾರೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.