X Close
X

'ಪಕ್ಷದಲ್ಲಿ ಯಾವುದೇ ಕಿತ್ತಾಟವಿಲ್ಲ: ಯಾರೊಬ್ಬರು ಲಕ್ಷ್ಮಣ ರೇಖೆ ದಾಟುವುದಿಲ್ಲ'


ashwath-neq
Bengaluru:

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಕಿತ್ತಾಟವಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಆಂತರಿಕ ಕಚ್ಚಾಟದಿಂದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನುಡಿದ ಭವಿಷ್ಯಕ್ಕೆ ತಿರುಗೇಟು ನೀಡಿದರು.

ಶಾಸಕರ ಬಂಡಾಯ ಹಾಗೂ ಪ್ರತ್ಯೇಕ ಸಭೆಯ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಕೆಲವರಿಗೆ ಸಣ್ಣ ಪುಟ್ಟ ಆಕ್ಷೇಪ ಇರುತ್ತದೆ. ಆದರೆ ಯಾರೋಬ್ಬರು ಪಕ್ಷದ ಲಕ್ಷ್ಮಣ ರೇಖೆ ದಾಟುವುದಿಲ್ಲ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ಸಿದ್ದರಾಮಯ್ಯ ಮಾತಿಗೆ ತಿರುಗೇಟು ನೀಡಿದ ಅವರು ಆಂತರಿಕ ಕಚ್ಚಾಟ ಏನು ಎಂಬುವುದು ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಆಂತರಿಕ ಕಚ್ಚಾಟದಿಂದ ಯಾವ ಸರ್ಕಾರಕ್ಕೆ ತೊಂದರೆಯಾಗಿದೆ ಎನ್ನುವುದು ಗೊತ್ತಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.