X Close
X

'KD' ವಿಭಿನ್ನ ಟೈಟಲ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ ಯೋಗರಾಜ್ ಭಟ್


Shivaraj-kumar-yogaraj-bhat

ಗಾಳಿಪಟ 2 ಸಿನಿಮಾದ ಯಶಸ್ಸಿನಲ್ಲಿರುವ ನಿರ್ದೇಶಕ ಯೋಗರಾಜ್ ಭಟ್ ಅವರು ಇಂದು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಈ ಸಿನಿಮಾದಲ್ಲಿ ತಮಿಳು ನಟ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಒಂದೇ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಯಾವ ಪಾತ್ರ ಎಂದು ರಿವೀಲ್ ಮಾಡಿಲ್ಲ.

ಆದರೆ ಸಿನಿಮಾದ ಹೆಸರು ರಿವೀಲ್ ಮಾಡಿರುವ ಅವರು, ಚಿತ್ರಕ್ಕೆ K ಕರಟಕ D ದಮನಕ ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದ್ದು, ಸದ್ಯ ಶಿವರಾಜ್ ಕುಮಾರ್, ಪ್ರಭುದೇವ ನಡುವಿನ‌ ಸನ್ನಿವೇಶ ನಡೆಯುತ್ತಿದೆ. ಶಿವಣ್ಣ ಹಾಗು ಪ್ರಭುದೇವ ಜೊತೆಗೆ ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಪ್ರೊಡಕ್ಷನ್ ನಂ 47 ಹೆಸರಿನಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.

(KANNADA PRABHA)