X Close
X

ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ?


minister-new
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿತರಿಸುವ ಮಧ್ಯಾಹ್ನದ ಬಿಸಿಯೂಟ ಯೋಜನೆ ಇನ್ನುಮುಂದೆದೆ ಪಿಯುಸಿ ವಿದ್ಯಾರ್ಥಿಗಳಿಗೂ ವಿಸ್ತರಣೆಯಾಗಲಿದೆ

ಮುಂದಿನ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಅದಮ್ಯ ಚೇತನ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪೌಷ್ಟಿಕಾಂಶ ಯುಕ್ತ ಹಾಲು ನೀಡುವ ಯೋಜನೆಗೆ ಸುರೇಶ್​ ಕುಮಾರ್​ ಇಂದು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಈಗ ಬಿಸಿಯೂಟವನ್ನು 10ನೇ ತರಗತಿಯವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದೆ. ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ವಿತರಿಸಬೇಕು ಎಂದು ಹಲವು ಬೇಡಿಕೆ ಇಟ್ಟಿದ್ದಾರೆ. ಜತೆಗೆ ಪ್ರೌಢಶಾಲೆ ಮತ್ತು ಪಿಯುಸಿ ಒಟ್ಟಿಗೆ ಇರುವೆಡೆ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಬಿಸಿಯೂಟ ವಿತರಿಸಲಾಗುತ್ತಿದೆ.

ಪಿಯುಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿಲ್ಲ. ಹಾಗಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ವಿತರಿಸುವ ಕುರಿತು ಶಿಕ್ಷಣ ಇಲಾಖೆಯಲ್ಲಿ ಚರ್ಚೆ ನಡೆದಿದೆ. ಸಿಎಂ ಬಿ.ಎಸ್​. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಈ ಕುರಿತು ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. (KANNADA PRABHA)