ಚಿತ್ರದುರ್ಗ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಹೊಡೆದ ಪರಿಣಾಮ ಚಿತ್ರದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೇರಳದ ಮಲಂಪುರದ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.
ಹಿರಿಯೂರಿನ ನಗರಸಭೆ ಸದಸ್ಯ ಎ.ಪಾಂಡುರಂಗ (37) ಹಾಗೂ ಐಮಂಗಲ ಹೋಬಳಿಯ ಜೆಡಿಎಸ್ ಮುಖಂಡ ಪ್ರಭಾಕರ್ (52) ಮೃತ ದುರ್ದೈವಿಗಳು.
ಎ.ಪಾಂಡುರಂಗ ಮತ್ತು ಪ್ರಭಾಕರ್ ಕಳೆದ ಭಾನುವಾರ ಪ್ರವಾಸಕ್ಕೆಂದು ಕೇರಳಕ್ಕೆ ತೆರಳಿದ್ದರು. ಅಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ, ಮಂಗಳವಾರ ರಾತ್ರಿ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ
ಅಪಘಾತದ ಘಟನೆ ಸಂಬಂಧ ಮೃತ ಕುಟುಂಬಗಳಿಗೆ ತಿಳಿಸಿದ್ದೇವೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ವಿವರಿಸಿದ್ದಾರೆ.
(KANNADA PRABHA)