ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಅವರು ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮ ಮತ್ತು ಪುನರ್ವಸತಿ ಕೇಂದ್ರದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನಿನ್ನೆ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಹಿಂದೆಯೂ ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿ ಸಾವಿನಿಂದ ಬಚಾವ್ ಆಗಿ ಮಾನಸಿಕ ಖಿನ್ನತೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಖಿನ್ನತೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಮಾದಯನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
(KANNADA PRABHA)