ಮಂಗಳೂರು: ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ನಟ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿಯ ಫ್ಲಾಟ್ ನಲ್ಲಿ ನರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸುರೇಂದ್ರ ಬಂಟ್ವಾಳ್ ಹಣಕಾಸು ವ್ಯವಹಾರ ಮಾಡುತ್ತಿದ್ದರು. ಹಣಕಾಸಿನ ವಿಚಾರಕ್ಕೆ ಜೊತೆಗಿದ್ದ ವ್ಯಕ್ತಿಗಳು ಬಂಟ್ವಾಳ್ ರನ್ನು ಹತ್ಯೆ ಮಾಡಿರಬಹುದು ಎಂಬ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಇನ್ನು ಬಂಟ್ವಾಳ್ ಕಳೆದ 2018ರ ಜೂನ್ ಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು. ಇದೇ ಅಲ್ಲದೆ ಬಂಟ್ವಾಳ ಪೇಟೆಯಲ್ಲಿ ತಲ್ವಾರ್ ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
(KANNADA PRABHA)